Friday, December 13, 2024

Latest Posts

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

- Advertisement -

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ. ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, ‘ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ. ನಮ್ಮ ಮುಂದಿನ ಹೋರಾಟ “ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ” ಎಂದು ವಿಜಯೇಂದ್ರ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ನ ಮನಸ್ಥಿತಿ ಮತ್ತೆ ಮತ್ತೆ ಅನಾವರಣಗೊಳ್ಳುತ್ತಿದೆ. ಸಂವಿಧಾನವನ್ನು ರಕ್ಷಿಸುವ ವಿಧಾನಸೌಧದ ಎದುರೇ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗುತ್ತಾರೆ ಎಂದರೆ ಕರ್ನಾಟಕದಲ್ಲಿ ಪರಿಸ್ಥಿತಿ ಎತ್ತ ಹೋಗುತ್ತಿದೆ. ಕಾಂಗ್ರೆಸ್ನ ಸೈಯದ್ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆಯಾದ ಗೆಲುವಿನ ಸಂಭ್ರಮದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ನಾಸೀರ್ ಹುಸೇನ್ ಪಕ್ಕದಲ್ಲೇ ಇರುವಾಗಲೇ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. “ಸ್ವಯಂ” ಸಂವಿಧಾನ ತಜ್ಞ ಎಂದು ಕರೆದುಕೊಳ್ಳುವ ಮಾನ್ಯ ಮುಖ್ಯಮಂತ್ರಿಗಳೇ ಯಾವಾಗ ಇಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೀರಾ? ಇಂದು ವಿಧಾನಸೌಧದ ಹೊರಾಂಗಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ನಾಳೆ ವಿಧಾನಸೌಧದ ಒಳಗೇ ಆಗಬಹುದೇನೋ ಎಂದು ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರೀತಂಗೌಡ, ರಾಜ್ಯದ ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ!! ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ತನ್ನ ಓಲೈಕೆ ನೀತಿಗಳಿಂದ ದೇಶದ್ರೋಹಿಗಳಿಗೆ ಯಾವುದೇ ಕಾನೂನಿನ ಭಯವಿಲ್ಲದಂತೆ ಮಾಡಿದೆ. ಮೊನ್ನೆಯಷ್ಟೇ ನಮ್ಮ ದೇಶದ ಸೈನಿಕರ ಬಗ್ಗೆ ಕೆಟ್ಟದಾಗಿ ಹಾಗೂ ಕಾಶ್ಮೀರದ ವಿಷಯದಲ್ಲಿ ಪಾಕಿಸ್ತಾನದ ಪರ ಮಾತನಾಡುವಾಕೆಯನ್ನು ನಮ್ಮ ಕರ್ನಾಟಕಕ್ಕೆ ಆಹ್ವಾನಿಸಿತ್ತು ಕಾಂಗ್ರೆಸ್ ಸರ್ಕಾರ. ಇಂದು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಬೆಂಬಲಿಗರು ಇಡೀ ರಾಜ್ಯದ ಪವರ್ ಹೌಸ್ ಆಗಿರುವ ವಿಧಾನಸೌಧದ ಆವರಣದಲ್ಲೇ ಶತ್ರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಪ್ರೀತಿಯ ಅಂಗಡಿ ತೆರೆಯುತ್ತೇವೆಂದವರು, ದ್ವೇಷದ ಹೋಲ್‌ಸೇಲ್ ಅಂಗಡಿಯನ್ನೇ ತೆರೆದಿದ್ದೀರಲ್ಲ, ಶಾಂತಿ-ಸಹಬಾಳ್ವೆಯ ಕರುನಾಡನ್ನು ಏನು ಮಾಡಬೇಕೆಂದು ಹೊರಟಿದ್ದೀರಿ? ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರೇ ಘಟನೆಯ ಸಂಪೂರ್ಣ ತನಿಖೆ ನಡೆಸಬೇಕು ಹಾಗೂ ಈ ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪ್ರೀತಂ ಗೌಡ ಹೇಳಿದ್ದಾರೆ.

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ: ರಾಜ್ಯಸಭಾ ಗೆಲುವಿನ ಬಗ್ಗೆ ಸಿಎಂ ಮಾತು

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

- Advertisement -

Latest Posts

Don't Miss