- Advertisement -
Political News: ಬೆಂಗಳೂರನ್ನು ಗುಂಡಿಯೂರು ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಜೆಡಿಎಸ್ ವಾಗ್ದಾಳಿ ನಡೆಸಿದೆ.
ಅಧಿಕಾರಕ್ಕೆ ಬಂದು 2 ವರ್ಷವೇ ಕಳೆದರೂ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ನಂಬಿಕೊಂಡರೇ ಪ್ರಯೋಜನವಿಲ್ಲ ಎಂದು ಸ್ಥಳೀಯ ನಿವಾಸಿಗಳು ತಾವೇ ಹಣ ಸಂಗ್ರಹಿಸಿ, ರಸ್ತೆಯಲ್ಲಿರುವ ಗುಂಡಿಗಳನ್ನು ಸಿಮೆಂಟ್ ಕಾಂಕ್ರೀಟ್ ಬಳಸಿ ಮುಚ್ಚುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರು ರಸ್ತೆಗಳ ಅವ್ಯವಸ್ಥೆ ನೋಡಿ ಬೇಸತ್ತಿರುವ ನಗರದ ಜನ ಪ್ರತಿ ದಿನ ಕಾಂಗ್ರೆಸ್ ಸರ್ಕಾರಕ್ಕೆ ಹಿಡಿಶಾಪ ಹಾಕುವುದು ಗ್ಯಾರಂಟಿಯಾಗಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
ಈ Tweetನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
- Advertisement -