Political News: ವಿಜಯಪುರ: ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಯಾರಿಗಾದರೂ ವಿಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲೂ ಪಂಚಮಸಾಲಿ ಸಮುದಾಯದ ನಾಯಕರನ್ನ ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ ಎಂದು ಬೇಸರಿಸಿದರು.
ಪಂಚಮಸಾಲಿ ಹೋರಾಟದಲ್ಲಿ ಇದ್ದವರನ್ನೇ ಟಾರ್ಗೆಟ್ ಮಾಡಿದ್ದಾರೆ. ಹೋರಾಟ ವಿರೋಧಿಸಿದ ಸಮಾಜದ ಕೆಲವರೊಟ್ಟಿಗೆ ಸೇರಿ ಒಳಸಂಚು ಮಾಡಿ ಯತ್ನಾಳ್ (Basanagouda Patil Yatnal) ಅವರಿಗೆ ಸಿಗಬೇಕಿದ್ದ ವಿಪಕ್ಷ ನಾಯಕ ಸ್ಥಾನವನ್ನ ತಪ್ಪಿಸಿದ್ದಾರೆ ಎಂದು ದೂರಿದರು.
ಬೆಳಗಾವಿ (Belagavi) ಚಳಿಗಾಲದ ಅಧಿವೇಶನದ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಿ. ಮೀಸಲಾತಿ ಘೋಷಿಸದಿದ್ದರೆ ಅಧಿವೇಶನದಲ್ಲಿ ಲಿಂಗ ಪೂಜೆ ಮಾಡುತ್ತೇವೆ. ಜಾತ್ಯತೀತ ಅಂತ ಹೇಳುವ ಸಿಎಂ ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು.
ತಮ್ಮ ಸಮುದಾಯ ಮೀಸಲಾತಿಗೆ ಶಿಫಾರಸು ಮಾಡಿದ್ದಾರೆ. ಅದೇ ರೀತಿ ಪಂಚಮಸಾಲಿ ಸಮುದಾಯದ ಮೀಸಲಾತಿಗೂ ಶಿಫಾರಸು ಮಾಡಲಿ. ಕಾಂಗ್ರೆಸ್ (Congress) ಪಕ್ಷದಲ್ಲಿರುವ ನಮ್ಮವರು ಇದಕ್ಕೆ ಒತ್ತಾಯ ಮಾಡಿದ್ದಾರೆ ಎಂದರು.
‘ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?’
ಮೂವರು ಅನಾಥ ಹೆಣ್ಣು ಮಕ್ಕಳ ಶಿಕ್ಷಣದ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ ಸಚಿವ ಸಂತೋಷ್ ಲಾಡ್