Saturday, July 12, 2025

Latest Posts

ಪಂಜಿನ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ

- Advertisement -

Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು.

ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಬಂದು ಮುಕ್ತಾಯವಾಯಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕೋಲಾಟ, ಮಹಿಳೆಯರ ಡೊಳ್ಳು ಕುಣಿತ, ಜಗ್ಗಲಿಗೆ ಮೇಳ, ಜಾಂಜ್ ಮೇಳ, ಲಂಬಾಣಿ ನೃತ್ಯ, ಯಕ್ಷಗಾನ‌ ವೇಷಧಾರಿಗಳು, ಕರಡಿ‌ ಮಜಲು, ಭಜನಾ ತಂಡ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಸಾವಿರಾರು ಯುವಕರು ಪಂಜು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದರು. ಸಂವಿಧಾನ, ಡಾ.ಬಿ.ಆರ್.ಅಂಬೇಡ್ಕರ್ ಕುರಿತಾದ ಜಯಘೋಷಗಳನ್ನು ಮೊಳಗಿಸಿದರು.

ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯರಾದ ರೇಣುಕಾ ಸುಕುಮಾರ್, ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಅಲ್ಲಾಭಕ್ಷ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪಗೋಳ, ಅಪರ ತಹಶೀಲ್ದಾರರಾದ ಜಿ.ವಿ.ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯರಾದ ಸಿ.ಆರ್.ಅಂಬಿಗೇರ, ವಿವಿಧ ಇಲಾಖೆಗಳ ಅಧಿಕಾರಿಗಳು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು, ಸಿಬ್ಬಂದಿ, ಪೌರ ಕಾರ್ಮಿಕರು, ನಿಲಯ ಪಾಲಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಅಭಿಮಾನಿಗಳಿಗೆ, ಕರುನಾಡ ಜನತೆಗೆ ಧನ್ಯವಾದ ತಿಳಿಸಿದ ಡಿಬಾಸ್ ದರ್ಶನ್

ಈ ಷರತ್ತು ಒಪ್ಪಿದರೆ ಮಾತ್ರ, ಇಂಡಿಯಾ ಕೂಟದೊಟ್ಟಿಗೆ ಹೊಂದಾಣಿಕೆ: ಸಮಾಜವಾದಿ ಪಾರ್ಟಿ

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

- Advertisement -

Latest Posts

Don't Miss