Thursday, May 30, 2024

Latest Posts

ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು: ಸಿಎಂ ಸಿದ್ದರಾಮಯ್ಯ

- Advertisement -

Political News: ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಕಲಬುರ್ಗಿಯಲ್ಲಿ ನಡೆದ ಬೃಹತ್ ಜನಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಬಿಜೆಪಿಯಿಂದ ಕೆಲ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು. ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

371ಜೆ ಜಾರಿ ಆಗುವುದಕ್ಕೆ ಖರ್ಗೆ ಅವರು ಪ್ರಮುಖ ಕಾರಣರು. ಇವರ ಹೋರಾಟ, ಶ್ರಮದಿಂದಾಗಿ ಈ ಭಾಗಕ್ಕೆ 371ಜೆ ಜಾರಿಯಾಗಿ ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ವರದಾನವಾಗಿದೆ. ಬಿಜೆಪಿಯವರು 371ಜೆ ಕೊಡಲು ಖಡಾಖಂಡಿತವಾಗಿ ನಿರಾಕರಿಸಿದ್ದರು. ಆದರೆ ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು. ಮಲ್ಲಿಕಾರ್ಜುನ ಖರ್ಗೆಯವರ ಸೋಲಿನಿಂದ ಈ ಭಾಗಕ್ಕೆ ಬಹಳ ನಷ್ಟ ಆಗಿದೆ. ಈ ಬಾರಿ ಅದಕ್ಕೆ ಅವಕಾಶ ಕೊಡಬಾರದು ಎಂದು ಸಿಎಂ ಹೇಳಿದರು.

ಕೆ.ಕೆ.ಆರ್.ಡಿ.ಬಿ ಮೂಲಕ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹5,000 ಕೋಟಿ ನೀಡಲಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರ ಅಭಿವೃದ್ಧಿ ಮತ್ತು‌ ಏಳಿಗೆಗಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ ಜೊತೆಗೆ ನುಡಿದಂತೆ ನಡೆದು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಸಂಸದರ ಅಸಮರ್ಥತೆಯ ಕಾರಣದಿಂದ ರಾಜ್ಯಕ್ಕೆ ಬರಬೇಕಾದ ಬರಗಾಲದ ಪಾಲನ್ನು ಪಡೆಯಲು ನಾವು ಸುಪ್ರೀಂಕೋರ್ಟ್ ಗೆ ಹೋಗಬೇಕಾಯಿತು. ಬರಗಾಲದ ಅನುದಾನದ ವಿಚಾರದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವ ಅಮಿತ್ ಷಾ ರಾಜ್ಯದ ಜನರಿಗೆ ದೊಡ್ಡ ಸುಳ್ಳು ಹೇಳಿದ್ದರು ಆದರೆ ಸುಪ್ರೀಂ ಕೋರ್ಟ್ ನಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

ನಾಲಾಯಕ್ ಪದ ಬಳಕೆ: ವಿಯಜೇಂದ್ರ ವಿರುದ್ಧ ಮರಾಠ ಸಮೂದಾಯದಿಂದ ಪ್ರತಿಭಟನೆ

ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ

- Advertisement -

Latest Posts

Don't Miss