Thursday, October 16, 2025

Latest Posts

ಬಿಡದಿವರೆಗೆ ಮೆಟ್ರೋ ಸಂಚಾರ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್‌

- Advertisement -

Political News: ಬರೀ ಬೆಂಗಳೂರಿನಲ್ಲೇ ಸಂಚರಿಸುತ್ತಿರುವ ಮೆಟ್ರೋವನ್ನು ಬಿಡದಿವರೆಗೆ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇಂದು ಬಿಡದಿಯ ಟೋಯೋಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯಿಂದ ಬೆಂಗಳೂರಿಗೆ ಹೋಗಿ ಕೆಲಸ ಮಾಡುವವರ ಸಂಖ್ಯೆ ಲಕ್ಷಕ್ಕೂ ಹೆಚ್ಚಿದೆ. ಅವರ ಪ್ರಯಾಣಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ಹಾಗಾಗಿ ಇಲ್ಲಿ ಎಂಪಿ, ಎಂಎಲ್‌ಎಗಳು ಸೇರಿ, ನಮ್ಮ ಜನಕ್ಕೆ ಪ್ರಯಾಣ ಸುಲಭವಾಗುವಂತೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ, ಕೆಲ ಕಾರ್ಮಿಕರು, ರೈತರು ಕೇಳುತ್ತಿದ್ದಾರೆ.

ಹಾಗಾಗಿ ಬೆಂಗಳೂರಿನಿಂದ ಬಿಡದಿವರೆಗೆ ಮೆಟ್ರೋ ವಿಸ್ತರಣೆ ಮಾಡಲು ನಾನು ಆದೇಶ ನೀಡಿದ್ದೇನೆ. ಇದು ಬರೀ ಪ್ಲಾನಿಂಗ್ ಆಗಿರಬಾರದು. ಅಭಿವೃದ್ಧಿಯಾಗಬೇಕು. ಹಾಗಾಗಿ ರಿಟರ್ನ್ ಬ್ಯಾಂಗಳೋರ್ ಅಥಾರಿಟಿ ಅಂತಾ ಯೋಜನೆ ಮಾಡಿ, ಅದಕ್ಕೆ ಸಹಿ ಕೂಡ ಹಾಕಿದ್ದೇನೆ. ಈ ಅಭಿವೃದ್ಧಿಗೆ ಬೇಕಾಗಿರುವ ವ್ಯವಸ್ಥೆಯಾಗುತ್ತದೆ ಎಂದು ಡಿಕೆಶಿ ಹೇಳಿದ್ದಾರೆ.

ಈ ಬಗ್ಗೆ ಡಿಕೆಶಿ ಟ್ವೀಟ್ ಕೂಡ ಮಾಡಿದ್ದು, ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಇಂದು ಉದ್ಘಾಟಿಸಿ, ಮಾತನಾಡಿದೆ. ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ.

ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆ ತಂತ್ರಜ್ಞಾನ ಹಾಗೂ ಹೊಸ ಉದ್ಯಮ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸಂಸ್ಥೆಯಿಂದ ಬಿಡದಿಯಲ್ಲಿ ಸ್ಥಾಪಿತವಾದ ತಾಂತ್ರಿಕ ತರಬೇತಿ ವಿಭಾಗ ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ, ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲಿದೆ. ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಮುಖವಾಗಿ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದೆ ಎಂದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?

‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘

- Advertisement -

Latest Posts

Don't Miss