Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ.
ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು ಕ್ರಮಗಳನ್ನ ಜರುಗಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆಯಲ್ಲಿ ಸಿಲುಕಬಾರದೆಂಬ ಉದ್ದೇಶದಿಂದ ಉತ್ತಮ ನಿರ್ಧಾರವನ್ನ ತೆಗೆದುಕೊಂಡಿದೆ.



