Saturday, July 27, 2024

Latest Posts

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

- Advertisement -

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು.

ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ತರ್ತೀರಿ. ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದರು. ಮತಾಂತರ ನಿಷೇಧ ವಿಧೇಯಕದ ಚರ್ಚೆಗೆ ನಾಳೆ ಅವಕಾಶ ಮಾಡಿಕೊಡಲಾಗುವುದು ಎಂದು ವಿಧಾನಸಭೆ ಸಭಾಪತಿ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಹೇಳಿದ್ದಾರೆ.

- Advertisement -

Latest Posts

Don't Miss