Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ ಮಾಡಲು ಕುಕ್ಕರ್‌ನಲ್ಲಿ ಬೇಳೆ ಬೇಯಿಸಲು ಗ್ಯಾಸ್ ಹೊತ್ತಿಸಿದ್ದರು. ಎರಡು ಸಿಟಿ ಬಂದ ಬಳಿಕ, ಕುಕ್ಕರ್ ಸ್ಪೋಟಗೊಂಡಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಮಹಿಳೆಯರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣಪುಟ್ಟ ಗಾಯವಾಗಿದ್ದ 6 ಜನರನ್ನು ಸವದತ್ತಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಕುಕ್ಕರ್ ಬ್ಲಾಸ್ಟ್ ಆಗಿದ್ದ ಜಾಗದಲ್ಲಿ ಬೆಂಕಿಹೊತ್ತಿಕೊಂಡಿದ್ದು, ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.




