Friday, November 22, 2024

Latest Posts

‘ನಮ್ಮ ಗ್ಯಾರಂಟಿ ಕಾಪಿ ಮಾಡಿ, ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’

- Advertisement -

Political News: ಇಂದು ಸಿಎಂ ಸಿದ್ದರಾಮಯ್ಯ, KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು.

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು ಎಂದು ಸಿಎಂ ಹೇಳಿದರು.

ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿದ್ದು ವಾಗ್ದಾಳಿ ನಡೆಸಿದ್ದಾರೆ.

ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

- Advertisement -

Latest Posts

Don't Miss