ಬೆಂಗಳೂರು: ಇತ್ತೀಚೆಗೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದ್ರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುವ ಮೂಲಕ ಪರಿಸ್ಥಿತಿ ಕೈಮೀರುತ್ತಿದೆ.

ಹೀಗಾಗಿ ಯಲಹಂಕದಲ್ಲಿ ವಿಶ್ವಭಾರತಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೊರೊನಾ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಯ್ದ ಸಾರ್ವಜನಿಕ ಜನಸಂದಣಿ ಸ್ಥಳಗಳಲ್ಲಿ ಹಾಡು ಮತ್ತು ನೃತ್ಯದ ಮೂಲಕ ಕೊರೊನಾ ಕುರಿತು ಈ ಸಂಸ್ಥೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.
‘ಮಾನವಕುಲಕ್ಕೆ ಮಾರಕವಾಗಿ ಕೊರೊನಾ ಬಂದೈತೆ’ ಎಂಬ ಸಾಲುಗಳೊಂದಿಗೆ ಆರಂಭವಾಗುವ ಹಾಡಿನಲ್ಲಿ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮನವರಿಕೆ ಮಾಡಿಸಲಾಗಿದೆ.
ಮಾಸ್ಕ್, ಸ್ಯಾನಿಟೈಸರ್ ಬಳಕೆ ಮತ್ತು ಅಂತರ ಕಾಯ್ದುಕೊಳ್ಳುವುದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯ ಎಂಬುದನ್ನು ಗೀತೆಯಲ್ಲಿ ವಿವರಿಸಲಾಗಿದೆ.
ಕಾರ್ಯಕ್ರಮದ ಕುರಿತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಮಾತನಾಡಿ. ಸರ್ಕಾರದ ಸೂಚನೆ ಮತ್ತು ನಿಯಮಗಳನ್ನು ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಭಾಗಿತ್ವ ಬಹಳ ಪ್ರಮುಖವಾಗಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ರು.
ಈ ಸಂದರ್ಭದಲ್ಲಿ ಯಲಹಂಕ ತಾಲೂಕು ಮಂಡಳಿಯ ಅಧಿಕಾರಿಗಳು ಮತ್ತು ಎಸಿಪಿ ಶ್ರೀನಿವಾಸಮೂರ್ತಿ, ಟ್ರಾಫಿಕ್ ಇನ್ಸ್ಪೆಕ್ಟರ್ ಮಂಜುನಾಥ್ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

