Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆ ಹಾನಗಲ್‌ನ 85 ವರ್ಷದ ವೃದ್ಧರೊಬ್ಬರನ್ನು ಕಿಮ್ಸ್‌ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರನ್ನು ಎಸ್‌ಡಿಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಿಗೂ ಕೆಮ್ಮು, ನೆಗಡಿ, ಜ್ವರ ಬಂದಿತ್ತು. ಗಂಟಲ ದ್ರವ ಮಾದರಿ ಪರೀಕ್ಷೆ ಮಾಡಿದಾಗ ಸೋಂಕು ದೃಢಪಟ್ಟಿದೆ.
ಯಾರೂ ಭಯಪಡುವ ಅಗತ್ಯವಿಲ್ಲ. 60 ವರ್ಷ ಮೇಲ್ಪಟ್ಟವರು ಜಾಗೃತರಾಗಿರಬೇಕು. ಪರಸ್ಪರ ಅಂತರ, ಮಾಸ್ಕ್ ಧರಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’
‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’