ರಾಜ್ಯದಲ್ಲಿ ಕೊರೊನಾ ಕಟ್ಟೆಚ್ಚರ

www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ವಾಪಸಾದ ನಂತರ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗುವುದು. ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

About The Author