- Advertisement -
ಕರ್ನಾಟಕ ಟಿವಿ : ಕೊರೊನಾ ವೈರಸ್ ದೇಶದಲ್ಲಿ ದಿನೇ ದಿನೇ ಹೆಚ್ಚಾಳವಾಗ್ತಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಸೋಂಕು ಧೃಢಪಟ್ಟಿದೆ. ಈ ಹಿನ್ನೆಲೆ ಆಸ್ಪತ್ರೆಗೆ ದಾಅಖಲಾಗಿದ್ದಾರೆ. ಈ ವಿಷಯವನ್ನ ಸ್ವತಃ ಅಮಿತ್ ಶಾ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ನನಗೆ ಕೊರೊನಾ ಸೊಂಕಿನ ಲಕ್ಷಣ ಗೋಚರಿಸಿತ್ತು.. ಪರೀಕ್ಷೆ ಮಾಡಿಸಿಕೊಂಡು ಸೋಂಕು ಧೃಢ ಪಟ್ಟ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗ್ತಿರುವೆ, ನನ್ನ ಸಂಪರ್ಕಕ್ಕೆ ಬಂದಿದ್ದೆ ಸಚಿವರು, ಸಂಸದರು, ಅಧಿಕಾರಿಗಳು ಸೆಲ್ಫ್ ಐಸೋಲೇಷನ್ ಗೆ ಒಳಗಾಗುವಂತೆ ಅಮಿತ್ ಶಾ ಮನವಿ ಮಾಡಿದ್ದಾರೆ.

ಕರ್ನಾಟಕ ಟಿವಿ, ಬೆಂಗಳೂರು
- Advertisement -