- Advertisement -
ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಗಂಟಲು ದ್ರವದ ಮಾದರಿಯನ್ನು ಕಳುಹಿಸಲಾಗಿದೆ ಎಂದರು.
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆಯೋದು ಕಡ್ಡಾಯವಾಗಿದೆ. ಕನಿಷ್ಠ ಒಂದು ಡೋಸ್ ಲಸಿಕೆ ಪಡೆಯದಂತ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗೋದಕ್ಕೆ ಅವಕಾಶ ಇಲ್ಲ. ವಿದ್ಯಾರ್ಥಿಗಳು ಲಸಿಕೆ ಪಡೆದು ಕಾಲೇಜಿಗೆ ತೆರಳುವಂತೆ ಸೂಚಿಸಿದರು.
- Advertisement -