Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ನಟನೆಯ “ಆಚಾರ್ಯ”(Acharya) ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್ ಮಾಡಲಾಗಿತ್ತು. ಆದರೆ ಈಗ ಬಿಡುಗಡೆ ದಿನಾಂಕವನ್ನು ಕೂಡ ಮುಂದಕ್ಕೆ ಹಾಕಲಾಗಿದೆ. ಬಹುತೇಕ ರಾಜ್ಯಗಳ ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಆಸನಗಳ ಭರ್ತಿಗೆ ಮಾತ್ರ ಅವಕಾಶ ಇರುವುದರಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

About The Author