ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿತ್ತು. ಈ ಬಗ್ಗೆ ಡಿ.ಕೆ.ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದರು. ಬಿಜೆಪಿ ಹೆದರಿಕೆಗೆ ನಾವು ಬಗ್ಗುವವರಲ್ಲ, ಇದಕ್ಕೆಲ್ಲ ನಾವು ಹೆದರುವವರಲ್ಲ ಎಂದು ಡಿ.ಕೆ.ಬ್ರದರ್ಸ್ ಹೇಳಿದ್ದರು.