ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4099 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ದೆಹಲಿಯಲ್ಲಿ ಪಾಸಿಟಿವ್ ದರವು ಹೆಚ್ಚಾಗಿದ್ದು, ಈಗ ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ದರ 6.45 ನಷ್ಟಿದೆ. ಹಾಗೂ ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಈ ಕುರಿತು ಸಿಎಂ ಕೇಜ್ರಿವಾಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಷಯ ಹಚ್ಚಿಕೊಂಡಿದ್ದು, ಮನೆಯಲ್ಲಿ ಐಸೋಲೇಷನ್ ನಲ್ಲಿ ಇದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪ್ರಸ್ತುತ 6888 ಕೋವಿಡ್ ರೋಗಿಗಳು ಐಸೋಲೇಷನ್ ನಲ್ಲಿದ್ದಾರೆ. ಈಗ ಕೊರೋನಾ ಹೆಚ್ಚಾಗುತ್ತಿರುವ ಕಾರಣದಿಂದಾಗಿ ವೀಕೆಂಡ್ ಕರ್ಫ್ಯೂ ಜಾರಿ ತಂದಿದ್ದು, ಶನಿವಾರ ಹಾಗೂ ಭಾನುವಾರ ಕಂಪ್ಲೀಟ್ ಬಂದ್ ಮಾಡಲ್ಪಟ್ಟಿದ್ದು , ಕೊರೋನಾ ಕಟ್ಟಿ ಹಾಕಲು ಸರ್ಕಾರ ಮುಂದಾಗಿದ್ದು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5 ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.