Senior singer ಲತಾ ಮಂಗೇಶ್ಕರ್​ ಗೆ ಕೊರೊನಾ ಸೋಂಕು ಧೃಡ.

ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಅವರ ಸೋದರ ಸೊಸೆ ರಚನಾ, ಕೊರೊನಾ ಪರೀಕ್ಷಾ ವರದಿ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್​ರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

About The Author