- Advertisement -
New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ ಅವರ ನೂತನ ಸಚಿವ ಸಂಪುಟವೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿಯವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯದಿಂದ ದೂರವಾಣಿ ಕರೆ ಮೂಲಕ ಆಹ್ವಾನ ನೀಡಲಾಗಿದೆ.
ಕಳೆದ ಬಾರಿ ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿರುವ ಪ್ರಹ್ಲಾದ್ ಜೋಶಿಯವರು ಐದನೇ ಬಾರಿಗೆ ಸಂಸದರಾಗಿ ಗೆದ್ದು ದಾಖಲೆ ಬರೆದಿದ್ದಾರೆ.
ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?
- Advertisement -

