- Advertisement -
www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ,
ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಅಗತ್ಯ ಇದೆ ಎಂದು ಹೇಳಿದರು. ಸಹಕಾರಿ ಕ್ಷೇತ್ರ ಕೂಡ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲು ಮುಂದೆ ಬರಬೇಕು ಅಂತ ತಿಳಿಸಿದ್ದಾರೆ.
- Advertisement -