Saturday, May 25, 2024

Latest Posts

ಕೋರ್ಟ್ ಆರೋಪಿ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ: ಕಮಿಷನರ್

- Advertisement -

Hubli News: ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿ ಕಾರ್ಪೋರೇಟರ್ ಮಗಳು ನೇಹಾ ಮರ್ಡರ್ ಪ್ರಕರಣ ಕುರಿತು ಹೇಳಿಕೆ ಕೊಟ್ಟಿರುವ ಕಮಿಷನರ್ ರೇಣುಕಾ ಸುಕುಮಾರನ್, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧನ ಮಾಡಲಾಗಿದೆ. ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅದು ಆಗುತ್ತೆ. ಈ ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದೇವೆ. ಸದ್ಯ ಆರೋಪಿಯನ್ನ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಕೋರ್ಟ್ ಕೂಡ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಕೊಟ್ಟಿದೆ ಎಂದಿದ್ದಾರೆ.

ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್’ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆದರೆ ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ ಯಾರೋ ದುಷ್ಕರ್ಮಿಯೊರ್ವ ಏಕಾಏಕಿ ಕುತ್ತಿಗೆಗೆ ಚಾಕು ಹಾಕಿದ್ದು, ಬಳಿಕ ಬೆನ್ನು, ಹೊಟ್ಟೆಗೆ ಇರಿದಿದ್ದಾನೆ.

ಅಷ್ಟಾಗಲೇ ನೇಹಾ ರಕ್ತದ ಮಡುವಿನಲ್ಲಿ ಬಿದಿದ್ದು, ಕೂಡಲೇ ಸ್ಥಳೀಯ ಸಹಪಾಠಿಗಳು ಹಾಗೂ ಕಾಲೇಜಿನ ಪ್ರೊಫೆಸರ್’ಗಳು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ಚಿಕಿತ್ಸೆ ಫಲಿಸದೇ ನೇಹಾ ಮೃತಪಟ್ಟಿದ್ದಾಳೆ.

ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌

ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?

- Advertisement -

Latest Posts

Don't Miss