Sunday, September 8, 2024

Latest Posts

ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್

- Advertisement -

ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು  ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್ ಲೈನ್ಸ್ ಗಳನ್ನು ನೀಡಿದ್ದು, ಸಾರ್ವಜನಿಕ ಸ್ಥಳ, ಸಭೆ, ಸಮಾರಂಭಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಸಲಹೆ ನೀಡಿದೆ.

ಮಂಚಮಸಾಲಿ ಮೀಸಲಾತಿ, ಡಿ. 29ಕ್ಕೆ ಸಿಎಂ ಬೊಮ್ಮಾಯಿ ಘೋಷಣೆ ಮಾಡುತ್ತಾರೆ : ಯತ್ನಾಳ್

ರಾಜ್ಯ ಸರ್ಕಾರದಿಂದ ಹೊಸದಾಗಿ ಗೈಡ್‌ಲೈನ್ಸ್‌ ರಿಲೀಸ್‌ ಮಾಡಲಾಗಿದೆ. ಪ್ರಕರಣಗಳಿಗೆ ಕೊವಿಡ್‌ ಟೆಸ್ಟ್‌ ಮಾಡಿಸುವುದು ಕಡ್ಡಾಯ. ಸೋಂಕಿನ ಲಕ್ಷಣ ಹೊಂದಿರುವವರು, ಖಚಿತ ಪ್ರಕರಣಗಳ ಸಂಪರ್ಕಿತರು ಇನ್ಮುಂದೆ ಕೋವಿಡ್​ ಪರೀಕ್ಷೆಗೆ ಒಳಪಡುವುದು ಕಡ್ಡಾಯ ಮಾಡಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತರುವ ತಂಡ ಕಾರ್ಯೋನ್ಮುಖವಾಗಬೇಕು. ಬಿಬಿಎಂಪಿ, ಜಿಲ್ಲಾ ವ್ಯಾಪ್ತಿಯಲ್ಲಿ ತಂಡ ಕಾರ್ಯೋನ್ಮುಖವಾಗಬೇಕು. ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ನಲ್ಲಿ ಕೋವಿಡ್‌ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್

ಕೇಂದ್ರದ ನಿಯಮದಂತೆ 2% ಪ್ರಯಾಣಿಕರಿಗೆ ಟೆಸ್ಟ್‌ ಮುಂದುವರಿಸಬೇಕು. ಪಾಸಿಟಿವ್ ಬಂದ್ರೆ ಜಿನೋಮಿಕ್ ಸೀಕ್ವೆನ್ಸ್‌ ಕಡ್ಡಾಯ ಮಾಡಲಾಗಿದೆ. ಜಿಲ್ಲಾಸ್ಪತ್ರೆ, ಖಾಸಗಿ ಮತ್ತು ವೈದ್ಯ ಕಾಲೇಜು ಆಸ್ಪತ್ರೆಗಳಲ್ಲಿ ಐಸೋಲೇಷನ್ ಬೆಡ್‌ ಮೀಸಲಿಡಬೇಕು. ಸೋಂಕು ಹೆಚ್ಚಾದಲ್ಲಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಸನ್ನದ್ಧವಾಗಿರಬೇಕು. ಆಕ್ಸಿಜನ್, ಬೆಡ್‌, ಔಷಧ ದಾಸ್ತಾನು ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಆಕ್ಸಿಜನ್ ಪೂರೈಕೆ ಖಚಿತಪಡಿಸಲು 15 ದಿನಕ್ಕೊಮ್ಮೆ ಡ್ರೈರನ್‌ ಕಡ್ಡಾಯವಾಗಿದೆ. ಆಸ್ಪತ್ರೆ ವೈದ್ಯ ಸಿಬ್ಬಂದಿ, ರೋಗಿಗಳು, ಸಂಬಂಧಿಕರಿಗೆ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ.

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

- Advertisement -

Latest Posts

Don't Miss