Wednesday, October 15, 2025

Latest Posts

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

- Advertisement -

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ.

35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವಿಮ್ಸ್ ನಿರ್ದೇಶಕ ಡಾ. ಟಿ. ಗಂಗಾಧರ್‌ಗೌಡ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಸೋಂಕಿತರೆಲ್ಲರೂ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.

- Advertisement -

Latest Posts

Don't Miss