ಮೈಸೂರಿನಲ್ಲಿ ಕೊರೊನಾ ಲಸಿಕಾ ಉತ್ಸವ…

ಮೈಸೂರು : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಇಂದು ಕೊರೊನಾ ಲಸಿಕಾ ಉತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಖಾಸಗಿ ಕಾಲೇಜೊಂದರ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಹಾಕುವ ಸಲುವಾಗಿ ಹಮ್ಮಿಕೊಂಡಿದ್ದ ಲಸಿಕಾ ಉತ್ಸವಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ ಮುಖ ಮಾಡಿಲ್ಲ. ಕೇವಲ ಆನ್ ಲೈನ್ ತರಗತಿಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ವಿದ್ಯಾರ್ಥಿಗಳಲ್ಲಿರುವ ಭಯ ಹೋಗಲಾಡಿಸುವ ಸಲುವಾಗಿ ಕೊರೊನಾ ಲಸಿಕಾ ಉತ್ಸವ ಆಯೋಜಿಸಲಾಗಿದೆ. ಬಳಿಕ ತರಗತಿಗಳನ್ನ ಆರಂಭಿಸಲು ಚಿಂತನೆ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಭರವಸೆ ನೀಡಿದ್ರು.

About The Author