Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೈನಿಕನಿಗೆ ಸಾಥ್ ಕೊಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸುವ ವೇಳೆ ಜೊತೆಗಿದ್ದು, ಶುಭ ಹಾರೈಸಿದೆ. ಚನ್ನಪಟ್ಟಣದಲ್ಲಿ ಕುಟುಂಬ ರಾಜಕಾರಣಕ್ಕೆ ಈ ಬಾರಿ ಮತದಾರರು ಪೂರ್ಣವಿರಾಮ ಹಾಕಲಿದ್ದಾರೆ. ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರ ಗೆಲುವು ಅಷ್ಟೇ ಸತ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸುವ ವೇಳೆ ಜೊತೆಗಿದ್ದು, ಶುಭ ಹಾರೈಸಿದೆ.
ಚನ್ನಪಟ್ಟಣದಲ್ಲಿ ಕುಟುಂಬ ರಾಜಕಾರಣಕ್ಕೆ ಈ ಬಾರಿ ಮತದಾರರು ಪೂರ್ಣವಿರಾಮ ಹಾಕಲಿದ್ದಾರೆ. ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರ ಗೆಲುವು… pic.twitter.com/ZciQ114Exx
— Siddaramaiah (@siddaramaiah) October 24, 2024