ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ ಎಂದು ಹೇಳಿದರು.
2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ
ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದ್ದು, ಕಾನೂನು ಶಿಸ್ತು ಸಮಿತಿ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದಲ್ಲಿ ಭದ್ರತೆ ಪರಿಶೀಲನೆ ಮಾಡಲಾಯಿತು. ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಭೇಟಿ ಭದ್ರತೆಯ ಕುರಿತಂತೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ-ನಿರ್ಗಮನದ ವೇಳೆ ಭದ್ರತಾ ಲೋಪವಾಗದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಸನ,ಮೈಸೂರು ಜಿಲ್ಲೆಯಿಂದಲೂ ಮಂಡ್ಯಕ್ಕೆ ಹೆಚ್ಚಿನ ಪೊಲೀಸರು ಭದ್ರತೆಗೆ ಆಗಮಿಸಲಿದ್ದಾರೆ. ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಯೋಗೇಶ್ವರ್ ಮಾಹಿತಿ ನೀಡಿದರು.
ಡಾ.ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಟ್ರೋಲ್ : ಸಿಡಿದೆದ್ದ ಅಪ್ಪು ಫ್ಯಾನ್ಸ್
ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿ