ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.
ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಿದ್ದರು..
ನಗರದ ಪ್ರಮುಖ ರೌಡಿಗಳ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ರೌಡಿಶೀಟರ್ ಕೋತಿರಾಮ,ಆರ್ ಟಿ ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಮತ್ತುಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.




