Karkala News: ಕಾರ್ಕಳ : ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್‍ಗಳ ಮಾಹಿತಿ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.
ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ.ಸಿಎಸ್ ಕೋರ್ಸ್‍ಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿ ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ. ತರಗತಿ ಕೊಠಡಿಗಳಲ್ಲಿ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಹೊರ ಪ್ರಪಂಚಕ್ಕೆ ಕಾಲಿಟ್ಟಾಗ ಎಲ್ಲಾ ಅನುಭವ ಪಡೆಯಲು ಸಾಧ್ಯ. ಸೂಕ್ತ ಅವಕಾಶಕ್ಕಾಗಿ ಕಾಯದೆ ಅವಕಾಶಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕು. ಭಾರತೀಯ ಸಿಎಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ಪ್ರಪಂಚದ ಅನೇಕ ದೇಶಗಳು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್‍ಗಳ ಯೋಜನೆಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುತ್ತಿವೆ ಎಂದರು.
ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಪ್ರಸ್ತಾವನೆಗೈದರು. ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಜೈನ್, ಅರ್ಥಶಾಸ್ತ್ರ ಉಪನ್ಯಾಸಕಿ ಅಭಿನಯ ಮತ್ತಿತರರು ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಉದಯಶ್ರೀ ಕಾರ್ಯಕ್ರಮ ನಿರೂಪಿಸಿದರು.
Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ