BREAKING NEWS: ನಾಳೆ ಸಚಿವಾಲಯ ಬಂದ್ ಮಾಡಿದ್ರೆ ಕ್ರಿಮಿನಲ್ ಕೇಸ್: ಪ್ರತಿಭಟನೆಗೆ ಮುಂದಾದ ನೌಕರರಿಗೆ CS ಖಡಕ್ ಎಚ್ಚರಿಕೆ

ಬೆಂಗಳೂರು: ನಾಳೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಚಿವಾಲಯ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದರು. ಈ ನೌಕರರಿಗೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ರೇ, ಕ್ರಿಮಿನಲ್ ಕೇಸ್ ಹಾಕೋದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದಿಂದ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಿನಾಂಕ 27-05-2022ರಂದು ಸಚಿವಾಲಯ ಬಂದ್ ಗೆ ಕರೆ ನೀಡಿದೆ. ಇದು ಕಾನೂನು ಬಾಹಿರವಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಸಚಿವಾಲಯ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿರೋ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಡ್ಡಾಯವಾಗಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ನಾಳೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಒಂದು ವೇಳೆ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದ್ರೇ.. ಅದನ್ನು ಲೆಕ್ಕಕ್ಕಿಲ್ಲದ ಅವಧಿ ( Dies-non ) ಎಂದು ಪರಿಗಣಿಸೋದಾಗಿ ತಿಳಿಸಿದ್ದಾರೆ.

ಇನ್ನೂ ನಾಳೆ ಕಚೇರಿಗೆ ಹಾಜರಾಗಲು ಇಚ್ಛೆ ಪಡುವ ಅಧಿಕಾರಿ, ಸಿಬ್ಬಂದಿಗಳನ್ನು ಅಡ್ಡಿ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್, ಇಲ್ಲವೇ ಶಿಸ್ತು ಕ್ರಮ ದಾಖಲಿಸಲು ಕ್ರಮ ವಹಿಸಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

About The Author