www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.
ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆ ಬರುವ ಸಾಧ್ಯತೆಗಳು ಹೆಚ್ಚಿದ್ದು, ಉತ್ತರ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಶಿಸಲಾಗಿದ್ದು, ಕರಾವಳಿ ಮಳೆನಾಡಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ.
ಇಂದು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬೀದರ್, ಕೊಪ್ಪಳ, ಕಲಬುರ್ಗಿ, ಯಾದಗಿರಿ, ರಾಯಚೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೇ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ವರದಿ ಮೂಲಕ ತಿಳಿದು ಬಂದಿದೆ. ಇದರ ಹಿನ್ನಲ್ಲೆಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ಮಳೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.