ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ: ಮೃತಪಟ್ಟ ಇಬ್ಬರು ಮಾಲಾಧಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ 9 ಜನ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಇಂದು ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆ ಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಆದರೆ ಇಂದು ನಿಂಗಪ್ಪ ಮಲ್ಲಪ್ಪ ಬೇಪೂರು (65) ಮತ್ತು ಸಂಜಯ ಪ್ರಕಾಶ್ ಸವದತ್ತಿ (30) ಎಂಬ ಇಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಮಾಲಾಧಾರಿಗಳ ಸಂಬಂಧಿಕರು ಮತ್ತು ಬೇರೆ ಮಾಲಾಧಾರಿಗಳು ಆಸ್ಪತ್ರೆಗೆ ಧಾವಿಸಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಬಗ್ಗೆ ಹೇಳಿಕೆ ಕೊಟ್ಟಿರುವ ಕಿಮ್ಸ್ ನಿರ್ದೇಶಕ ಡಾ. ಎಸ್ ಎಫ್ ಕಮ್ಮಾರ, ಸಿಲಿಂಡರ್ ಸ್ಪೋಟಗೊಂಡು ಇಬ್ಬರ ಸಾವು ಪ್ರಕರಣ. ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಆರು ಗಾಯಾಳುಗಳ ಸ್ಥಿತಿಯೂ ಚಿಂತಾಜನಕವಾಗಿದೆ. ಮೃತಪಟ್ಟ ಇಬ್ಬರಿಗೂ ಶೇ 90 ರಷ್ಟು ಸುಟ್ಟ ಗಾಯಗಳಾಗಿದ್ದವು.

ಬದುಕುಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡಿದೆವು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರ ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ ಒಬ್ಬ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಆದರೆ ಆರು ಜನರ ಸ್ಥಿತಿ ಕ್ರಿಟಿಕಲ್ ಆಗಿದೆ. ಇತರೆ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗುವುದೆಂದು ವೈದ್ಯರು ತಿಳಿಸಿದ್ದಾರೆ.

About The Author