Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಇನ್ನೋರ್ವ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಲಿಂಗರಾಜ ಸಿದ್ದಪ್ಪ ಬೀರನೂರ ಎಂಬ ಅಯ್ಯಪ್ಪ ಮಾಲಾಧಾರಿ ಯುವಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲಿಂಗರಾಜು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ನಿನ್ನೆ ಇಬ್ಬರು ಮಾಲಾಧಾರಿಗಳು ಮತ್ತು ಇಂದು ಬೆಳಿಗ್ಗೆ ಓರ್ವ ಮಾಲಾಧಾರಿ ಸಾವನ್ನಪ್ಪಿದ್ದರು. ಇದೀಗ ನಾಲ್ಕನೇ ಮಾಲಾಧಾರಿ ಸಾವನ್ನಪ್ಪಿದ್ದು, 5 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ 14 ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ವಾಾಸವಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ, ಸ್ಪೋಟವಾಗಿತ್ತು. ಈ ಅವಘಡದಲ್ಲಿ 9 ಮಾಲಾಧಾರಿಗಳು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ 4 ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ. ಈ 9 ಮಾಲಾಧಾರಿಗಳಲ್ಲಿ ಐವರು ಮಾಲಾಧಾರಿಗಳು ನಿನ್ನೆಯ ಸಾವಿನ ಸುದ್ದಿ ತಿಳಿದು, ಮಾಲೆ ತೆಗೆದಿದ್ದರು.




