- Advertisement -
ನವದೆಹಲಿ: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಮತ್ತು ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಭಾನುವಾರ ಮುಂಬೈ ಬಳಿಯ ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ, ಮಿಸ್ತ್ರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ವೈದ್ಯರು ಘೋಷಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಅಹಮದಾಬಾದ್ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ 4 ಮಂದಿ ಇದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪಾಲ್ಘರ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
- Advertisement -