ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು ನಮ್ಮ ಸ್ವಾಭಿಮಾನದ ಪ್ರಶ್ನೆ. ಈ ಹಿಂದೆ ಎಸ್‌ಎಂ ಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮಂಡ್ಯದಿಂದ ಚುನಾವಣಾ ಪ್ರಚಾರ ನಡೆಸಿದ್ದರು. ನಾನು ಕೂಡ ಮಂಡ್ಯದಿಂದಲೇ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಬಿಜೆಪಿಗೆ ಭವಿಷ್ಯವಿಲ್ಲ. ಕಾಂಗ್ರೆಸ್‌ ಪಕ್ಷ ಉತ್ತಮ ಆಡಳಿತ ನೀಡಲಿದೆ ಎಂದು ತಿಳಿಸಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಸಕ್ಕರೆ ನಾಡು ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್ ಗಣಿಗ ಅವರ ಪರವಾಗಿ ಇಂದು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ ಮತಯಾಚಿಸಿದೆ. ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಜನಪರ ಆಡಳಿತ ನೀಡುತ್ತೇವೆ ಎಂದು ತಿಳಿಸಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

‘ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕರೆ ಮಾಡ್ತಿನಿ, ಅಷ್ಟು ಭಯದ ವಾತಾವರಣವಿದೆ ‘

40 ಸ್ಟಾರ್ ಪ್ರಚಾರಕರ ಲೀಸ್ಟ್ ಬಿಡುಗಡೆ ಮಾಡಿದ ಬಿಜೆಪಿ

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

About The Author