Friday, April 18, 2025

Latest Posts

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

- Advertisement -

ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಅಲ್ಲದೇ, ಡಿಕೆಶಿ ಪುತ್ರಿ ಐಶ್ವರ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಅಪ್ಪನಿಗೆ ವಿಶ್ ಮಾಡಿದ್ದಾರೆ. ತಮ್ಮ ಮದುವೆಯ ಮುನ್ನಾ ದಿನ ಅಪ್ಪನಿಗಾಗಿ ಡಾನ್ಸ್ ಡೆಡಿಕೇಟ್‌ ಮಾಡಿದ್ದ ಐಶ್ವರ್ಯ, ಅದೇ ಡಾನ್ಸ್ ಕ್ಲಿಪ್ಸ್, ತಮ್ಮ ಹಳೆಯ ಫೋಟೋಗಳ ತುಣುಗಳನ್ನ ಕೂಡಿಸಿ, ವೀಡಿಯೋ ಮಾಡಿ, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. 

‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

‘ಅಮ್ಮ ಅನ್ನೋದು ಕೇವಲ ಪದವಲ್ಲ. ಅದೊಂದು ಪರಿಪೂರ್ಣ ಅನುಭೂತಿ ‘

- Advertisement -

Latest Posts

Don't Miss