Thursday, October 23, 2025

Latest Posts

‘ನಾಳೆ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಎಲ್ಲರೂ ಬನ್ನಿ’

- Advertisement -

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಂ, ಡಿಸಿಎಂ ಪದಗ್ರಹಣ ಸಮಾರಂಭಕ್ಕೆ, ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ.

ವೀಡಿಯೋ ಮಾಡಿ ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದೀರಿ. ನಾವು ಅಧಿಕಾರಕ್ಕೆ ಬರುವಂತೆ ಆಶೀರ್ವಾದ ಮಾಡಿದ್ದೀರಿ. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಇದೇ ನೀವು ನಿಮಗೆ ಕೊಡುವ ಆಹ್ವಾನ ಪತ್ರಿಕೆ ಎಂದು ತಿಳಿದು,ತಾವೆಲ್ಲರೂ ಆಗಮಿಸಬೇಕು ಎಂದು ಡಿಕೆಶಿ ಹೇಳಿದ್ದಾರೆ.

ಅಖಂಡ ಕರ್ನಾಟಕ ಕಾತುರದಿಂದ ಕಾಯುತ್ತಿರುವ ಐತಿಹಾಸಿಕ ಘಳಿಗೆ ಬಂದಿದೆ. ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಎಲ್ಲರನ್ನೂ ಹೃದಯಪೂರ್ವಕವಾಗಿ ಸ್ವಾಗತಿಸುತ್ತಿದ್ದೇನೆ ಎಂದು ಡಿಕೆಶಿ ಟ್ವೀಟ್ ಮಾಡುವ ಮೂಲಕ ಸ್ವಾಗತಿಸಿದ್ದಾರೆ.

ಅಲ್ಲದೇ, ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ‌ ಸಮಾರಂಭ ಇರುವ ಕಾರಣ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನಮ್ಮ ಮನವಿ: * ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ * ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ. * ಯಾವುದೇ ಸಹಾಯ ಬೇಕಿದ್ದರೂ ಪೊಲೀಸರನ್ನು ಸಂಪರ್ಕಿಸಿ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಿದ ಸಿದ್ದರಾಮಯ್ಯ, ಡಿಕೆಶಿ

ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

- Advertisement -

Latest Posts

Don't Miss