ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು ನನ್ನ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗತ್ತೆ ಎಂದು ಡಿಕೆಶಿ ಹೇಳಿದ್ದಾರೆ.
ಅಲ್ಲದೇ, ಮಂಡ್ಯದಲ್ಲಿ ಕಳೆದ ಬಾರಿ ಒಂದು ಸೀಟು ಗೆಲ್ಲೋಕೆ ಆಗಲಿಲ್ಲ. ಈ ಬಾರಿ ಅಭ್ಯರ್ಥಿ ಹಾಕಿದ್ದೇವೆ ಹೀಗಾಗಿ ಆಶೀರ್ವಾದ ಮಾಡಿ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಮಳವಳ್ಳಿ ಜನ ಬೆಂಬಲಿಸಬೇಕು. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಬಿಜೆಪಿನ ದೂರ ಇಟ್ಟು ಕುಮಾರಸ್ವಾಮಿ ಗೆ ದರ್ಬಾರ್ ಮಾಡು ಅಂತ ಅಧಿಕಾರ ಕೊಟ್ಟೋ ಆದ್ರೆ ಅವರು ಉಳಿಸಿಕೊಳ್ಳಿಲ್ಲ.ನಿಮ್ಮ ಬದುಕಿನಲ್ಲಿ ಏನಾದ್ರೂ ಬದಲಾವಣೆ ಆಗಿದೆಯಾ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
10 ರಂದು ಮತದಾನದಲ್ಲಿ ನಿಮ್ಮ ಭವಿಷ್ಯನ ನೀವೇ ನಿರ್ಮಾಣ ಮಾಡೋವಂತಹ ದಿನ. ನಿಮಗೆ ಅಚ್ಚೆ ದಿನ ತರ್ತಿವಿ ಅಂದ್ರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ದುಷ್ಟ ಆಡಳಿತ ನೀಡುತ್ತಿದೆ. ಮೂರುವರೆ ವರ್ಷ ಒಂದು ಸರ್ಕಾರವನ್ನು ನೋಡಿದ್ದೇವೆ. ಇಷ್ಟು ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದಿಯೇ ಎಂಬುವುದನ್ನು ಅರಿತುಕೊಳ್ಳಿ ಎಂದು ಡಿಕೆಶಿ ಹೇಳಿದ್ದಾರೆ.
ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

