‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ.

ನಿಮ್ಮ ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತ ದೊಡ್ಡ ಉಡುಗೋರೆ ನಿರೀಕ್ಷಿಸಲು ಸಾಧ್ಯವೇ? ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

About The Author