Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ.
84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ ಡಿಸ್ಚಾರ್ಜ್ ಆಗಿ ಮನೆಗೆ ಬಂದ ಕೆಂಪಣ್ಣ, ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕೆಂಪಣ್ಣ ಈ ಬಗ್ಗೆ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇದನ್ನೇ ಹಿಡಿದಿದ್ದ ಕಾಂಗ್ರೆಸ್ ಬಿಜೆಪಿ ವಿರುದ್ಧ 40 ಪರ್ಸೆಂಟ್ ಅಭಿಯಾನ ಮಾಡಿದ್ದರು. ಇದೇ ಅಭಿಯಾನದಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವನ್ನೂ ಸಾಧಿಸಿತ್ತು.
ಆದರೆ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ, ಮತ್ತೆ ಕೆಂಪಣ್ಣ, 40 ಪರ್ಸೆಂಟ್ ಕಮಿಷನ್ ಪಡೆಯುವ ಕೆಲಸ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರೆದಿದೆ ಎಂದು ಆರೋಪಿಸಿದ್ದರು. ಅಲ್ಲದೇ, ಇದರಿಂದಾಗಿ ಗುತ್ತಿಗೆದಾರರಿಗೆ ಸಮಸ್ಯೆಯಾಗುತ್ತಿದೆ ಎಂದರು.




