Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.
ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮಗಳ ಜನ ಪ್ರವಾಹ ಭೀತಿಯಿಂದ ಆತಂಕಕ್ಕೀಡಾಗಿದ್ದಾರೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 60 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗಿದ್ದು, ಪ್ರವಾಹಕ್ಕೆ ತುತ್ತಾಗುವ ಗ್ರಾಮದಲ್ಲಿ ಎಚ್ಚರಿಕೆಯಿಂದ ಇರುವಂತೆ ಡಂಗೂರ ಸಾರಲಾಗಿದೆ.
ಇಂಥ ಗ್ರಾಮಗಳಿಗೆ ಪ್ರವಾಹ ಪರಿಸ್ಥಿತಿ ಬರುತ್ತಿದೆ. ಬೇರೆ ಗ್ರಾಮಗಳಿಗೆ ಸ್ಥಳಾಂತರವಾಗಿ, ಬೇರೆ ಗ್ರಾಮಗಳಿಗೆ ಹೋಗಿ ಎನ್ನಲಾಗಿದೆ. ಘಟಪ್ರಭಾ ತೀರದ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಡಂಗೂರ ಸಾರಲಾಗಿದ್ದು, ಕೆಲವರು ಕಾಳಜಿ ಕೇಂದ್ರಗಳಿಗೆ ದನಕರುಗಳ ಜೊತೆಗೆ ಸ್ಥಳಾಂತರಗೊಂಡಿದ್ದಾರೆ. 6 ಕುಟುಂಬದ 32 ಜನರ ಜೊತೆ 8 ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.

