Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್ನಲ್ಲಿ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ನಮ್ಮ ಇಲಾಖೆಯವರು ತನಿಖೆ ಮಾಡ್ತಾರೆ. ಅದರ ಬಳಿಕವೇ ಕಾರಣ ಗೊತ್ತಾಗಲಿದೆ. ಈಗ ಇಷ್ಟೇ ಮಾಹಿತಿ ನಮಗೆ ಗೊತ್ತಿರುವುದು ಎಂದು ಹೇಳಿದ್ಧಾರೆ.
ಇದು ಮರ್ಡರ್ ಕೇಸ್ ಆಗಿದ್ದರಿಂದ ಕೇಸ್ ಸಿರಿಯಸ್ ಆಗಿದೆ. ಇದರಲ್ಲಿ ದರ್ಶನ್ ಪಾತ್ರ ತನಿಖೆ ಬಳಿಕವೇ ಗೊತ್ತಾಗಲಿದೆ. ವೈಯುಕ್ತಿಕವೋ..ಏನು ಅನ್ನೋದು ತನಿಖೆಯಿಂದ ಗೊತ್ತಾಗಲಿದೆ.. ಈಗ ನಮಗೆ ಇಷ್ಟು ಮಾತ್ರ ಗೊತ್ತಿರುವ ಮಾಹಿತಿ ಎಂದ ಪರಮೇಶ್ವರ್ ತಿಳಿಸಿದ್ಧಾರೆ.
ಪ್ರಕರಣದ ಕುರಿತು ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ, ತನಿಖೆಯಲ್ಲಿ ಕನ್ನಡ ಚಿತ್ರರಂಗದ ನಟ ದರ್ಶನ್ ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ರೇಣುಕಾ ಸ್ವಾಮಿ ದರ್ಶನ್ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ’ ಎಂದಿದ್ದಾರೆ.
ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?