Sandalwood: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜಾಮೀನು ದೊರೆಯಲಿ ಎಂದು ಪ್ರಾರ್ಥಿಸಿ, ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದೇವತೆ ಶ್ರೀ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ್ ಅವರಿಗೆ ಜಾಮೀನು ದೊರೆತು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿಯ ಬಳಿ ವಿಜಯಲಕ್ಷ್ಮಿ ಮೊರೆ ಇಟ್ಟರು. ಈ ಸಂದರ್ಭದಲ್ಲಿ ದೇವರ ಅಪ್ಪಣೆ ಕೇಳಿದಾಗ, ಶೀಘ್ರದಲ್ಲಿಯೇ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ ಸೂಚನೆ ದೊರೆತಿದೆ ಎಂದು ಹೇಳಲಾಗುತ್ತಿದೆ.
ದರ್ಶನ್ ಜೈಲಿನಿಂದ ಬಿಡುಗಡೆಯಾದರೆ ಪತಿಯೊಂದಿಗೆ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿ ಹರಕೆ ತೀರಿಸುವುದಾಗಿ ವಿಜಯಲಕ್ಷ್ಮಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ.




