Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ.
ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ನವೆಂಬರ್ 13ಕ್ಕೆ ಚುನಾವಣೆ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಚೆನ್ನಪಟ್ಟದ ಶಾಸಕ ಸ್ಥಾನ ತೆರವಾಗಿದೆ. ಅದೇ ರೀತಿ ಶಿಗ್ಗಾವಿಯಲ್ಲಿ ಬೊಮ್ಮಾಯಿ, ಇ.ತುಕಾರಾಂ ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀರಾಮೆ ನೀಡಿದ್ದು, ಇವೆರಡೂ ಕ್ಷೇತ್ರದ ಶಾಸಕ ಸ್ಥಾನ ತೆರವಾಗಿದೆ. ಈ ಕಾರಣಕ್ಕೆ ಈ ಮೂರು 3 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.