ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ.
ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಈ ಹಣ ಗಣೇಶ ಚತುರ್ಥಿ ಒಳಗೆ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ ಒಟ್ಟಾರೆ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ರಾಜ್ಯ ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.
ಇನ್ನು ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಪರಿಶೀಲಿಸಲು, ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಿ. ನಿಮ್ಮ ನೋಂದಾಯಿತ ರುಜುವಾತುಗಳೊಂದಿಗೆ ಲಾಗಿನ್ ಮಾಡಿ ಗೃಹಲಕ್ಷ್ಮಿ ಅರ್ಜಿ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ. ನಿಮ್ಮ ಅರ್ಜಿ ಅಥವಾ ಪಾವತಿಯ ಸ್ಟೇಟಸ್ ಅನ್ನು ಪರಿಶೀಲಿಸಲು ನಿಮ್ಮ ಅರ್ಜಿ ಸಂಖ್ಯೆ ಮತ್ತು ಆಧಾರ್ ವಿವರಗಳನ್ನು ನಮೂದಿಸಿ. ಈ ರೀತಿಯಾಗಿ ನಿಮ್ಮ ಹಣವನ್ನು ಪರಿಶೀಲಿಸಬಹುದು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ