Davanagere: ದಾವಣಗೆರೆ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು.
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು, ತರಳಬಾಳು ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಂತವೀರ ಮಹಾಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಬಸವ ಶಾಂತಲಿಂಗ ಸ್ವಾಮೀಜಿ, ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಹಾಗೂ ಹಡಪದ ಗುರುಪೀಠ, ಅಂಬಿಗರ ಗುರುಪೀಠದ, ಮೇದಾರ ಗುರುಪೀಠ, ಹೆಳವ ಗುರುಪೀಠದ, ನೇಕಾರ ಗುರುಪೀಠದ ಸ್ವಾಮೀಜಿಗಳು ಉದ್ಘಾಟನಾ ಮತ್ತು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.
ಶಂಭುಹೆಗಡೆ, ವಿನಯಾ ಒಕ್ಕುಂದ, ರಂಜಾನ್ ದರ್ಗಾ, ಡಾ. ಎಂ ವಿಶ್ವನಾಥ್, ಡಾ. ಅನಸೂಯ ಕಾಂಬ್ಳೆ, ಸಂಜೀವ ಕುಲಕರ್ಣಿ ಸೇರಿದಂತೆ ಒಂಬತ್ತು ಮಂದಿ ತಜ್ಞರು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಕುರಿತು ವಿವಿಧ ವಿಷಯಗಳನ್ನು ಮಂಡಿಸಿದರು.
ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರು ಉಪಸ್ಥಿತರಿದ್ದು ಮಾತನಾಡಿದರು. ಸಚಿವ ಸಂತೋಷ್ ಲಾಡ್ ಅವರು, ಧನ್ಯವಾದಗಳನ್ನು ಸಮರ್ಪಿಸಿದರು.