Davanagere: ನನಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

ಅಲ್ಲದೇ ಈ ಘಟನೆ ಖಂಡಿಸಿ ಇದೇ 17ರಂದು ವಿಜಯೇಂದ್ರ ಸಾರಥ್ಯದಲ್ಲಿ ಜನಾರ್ಧನ ರೆಡ್ಡಿ, ಶ್ರೀರಾಮುಲು, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ನಾಯಕರು ಪ್ರತಿಭಟನೆ ನಡೆಸಲಿದ್ದು, ಬೆಂಗಳೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೂಂಡಾಗಿರಿ ಬಗ್ಗೆ ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆಂದು ರೇಣುಕಾಚಾರ್ಯ ಹೇಳಿದ್ದಾರೆ.

ಇನ್ನು ಬಿಜೆಪಿಯಿಂದ ಉಚ್ಛಾಟಿತವಾಗಿರುವ ನಾಯಕರ ಬಗ್ಗೆ ಮಾತನಾಡಿರುವ ರೇಣುಕಾಚಾರ್ಯ, ನನಗೆ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ. ನೀವು ನನ್ನ ಬಾಯಿಯಿಂದ ಎಲ್ಲ ಸತ್ಯವನ್ನೂ ಹೇಳಿಸುವ ಪ್ರಯತ್ನ ಮಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಯತ್ನಾಳ್ ಹೇಳಿಕೆ ವಿರುದ್ಧ ರೇಣುಕಾಚಾರ್ಯ ಪರೋಕ್ಷವಾಗಿಯೇ ಕಿಡಿಕಾರಿದ್ದರು.

About The Author