- Advertisement -
ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಜಿಲ್ಲೆಯಲ್ಲಿ ಈಗಾಗಲೆ ಮತದಾರರ ಪಟ್ಟಿ ಪರಿಷ್ಕರಣೆ ಆರಂಭಿಸಿದ್ದೇವೆ, ಜಿಲ್ಲೆಯಲ್ಲಿ ಸುಮಾರು 30 ಸಾವಿರ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಶಿವಾನಂದ ಅವರು ತಿಳಿಸಿದರು.
ಕ್ಲೀಯರೆನ್ಸ್ ಸರ್ಟಿಫಿಕೇಟ್ ಪಡೆದ ನಂತರವೇ ಮನೆ ಬಾಡಿಗೆ ಸಿಗಲಿದೆ : ಮೈಸೂರು ನಗರ ಪೊಲೀಸ್ ಕಮಿಷನರ್
ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು
- Advertisement -