Saturday, September 21, 2024

Latest Posts

David Warner: ಟಿ20 ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

- Advertisement -

ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಹೊರಬಿದ್ದ ಬೆನ್ನಲ್ಲೇ ಓಪನರ್ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.
ಟೀಮ್ ಇಂಡಿಯಾ ವಿರುದ್ಧದ ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕ್ರಿಕೆಟ್ ಅಂತ್ಯಗೊಳಿಸಿದ್ದಾರೆ.
ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಟಿ20 ವಿಶ್ವಕಪ್​ ಮೂಲಕ ಟಿ20 ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ವಾರ್ನರ್ 3277 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 28 ಅರ್ಧಶತಕಗಳು ಸೇರಿವೆ.

- Advertisement -

Latest Posts

Don't Miss