Sunday, September 8, 2024

Latest Posts

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

- Advertisement -

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಹೊಸದಾಗಿ ರಸ್ತೆಗಳ ಅಭಿವೃದ್ಧಿ ಆಗುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಬೇಕು. ಇದಕ್ಕೆ ಚಾಲಕರು, ಸಾರ್ವಜನಿಕರು, ಪಾದಾಚಾರಿಗಳು ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ 

ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ ಕರ್ನಾಟಕದಾದ್ಯಂತ ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ, ಚಾಲಕರಲ್ಲಿ, ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ನಾಲ್ಕು ಮಾಹಿತಿ ವಾಹನಗಳ ಸಂಚಾರ ನಡೆಸುತ್ತಿದೆ. ಅದರಲ್ಲಿ ಒಂದು ವಾಹನ ಮಂಡ್ಯ ಜಿಲ್ಲೆಗೆ ಆಗಮಿಸಿದೆ. ವಾಹನದಲ್ಲಿ ಎಲ್.ಇ.ಡಿ ಸ್ಕ್ರೀನ್ ಗಳ ಮೂಲಕ ಮದ್ಯಪಾನ ಸೇವಿಸಿ ವಾಹನ ಚಾಲನೆ ಮಾಡಬಾರದು, ಹೆಲ್ಮೆಟ್ ಧರಿಸಿ ಸೇರಿದಂತೆ  ವಿವಿಧ ನಿಯಮಗಳ  ಬಗ್ಗೆ ಹಾಗೂ ಪಾಲಿಸದಿದ್ದಲ್ಲಿ ವಿಧಿಸುವ ದಂಡಗಳ ಬಗ್ಗೆ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

ವಾಹನವು ಇಂದಿನಿಂದ  ಡಿಸೆಂಬರ್ ಅಂತ್ಯದ ವರೆಗೂ ಮಂಡ್ಯ ಜಿಲ್ಲೆಯಾದ್ಯಂತ  ಜನರು ಹೆಚ್ಚು ಇರುವ ಸ್ಥಳಗಳಲ್ಲಿ,  ಬಸ್ ನಿಲ್ದಾಣಗಳಲ್ಲಿ, ಸಾರ್ವಜನಿಕ ಕಚೇರಿಗಳ ಬಳಿ,  ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ, ಹೋಬಳಿ ಕೇಂದ್ರಗಳಲ್ಲಿ ಸಂಚರಿಸಿ ಅರಿವು  ಮೂಡಿಸಲಾಗುವುದು.  ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಕಾರ್ಯಕ್ರಮದಲ್ಲಿ ಎ.ಎಸ್.ಪಿ.ವೇಣುಗೋಪಾಲ್ ಎಂ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ವಿವೇಕಾನಂದ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಭಾಸ್ಕರ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ನಿರ್ಮಲ ಎಸ್.ಹೆಚ್, ಆರ್.ಟಿ.ಒ ಅಧೀಕ್ಷಕರಾದ ಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ರೆಸಿಪಿ..

ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು ಸೇವಿಸಿ..

- Advertisement -

Latest Posts

Don't Miss